ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಪತ್ರವನ್ನು ನೀಡುವಾಗ ಮತ್ತು ಪಡೆಯುವಾಗ ಅನುಸರಿಸಬೇಕಾದ ಕಾನೂನು ಕ್ರಮಗಳು ಕುರಿತು ಕಂದಾಯ ಅಧಿಕಾರಿಗಳು ಮತ್ತು ಪರಿಶಿಷ್ಟ ಪಂಗಡದ ಜನ ಪ್ರತಿನಿಧಿಗಳಿಗೆ ಒಂದು ದಿನದ ತರಬೇತಿಯನ್ನು ಈ ಕೆಳಕಂಡ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿದೆ
1 | ರಾಯಚೂರು | ರಾಯಚೂರು, ಗುಲ್ಬರ್ಗ, ಬೀದರ್, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳು. |
---|---|---|
2 | ಧಾರವಾಡ | ಧಾರವಾಡ, ಬೆಳಗಾಂ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು. |
3 | ಹಾವೇರಿ | ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳು. |
3 | ದಾವಣಗೆರೆ | ಕೊಪ್ಪಳ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳು |
4 | ಕೊಡಗು | ಮಡಿಕೇರಿ, ಸೋಮವಾರಪೇಟೆ ಮತ್ತು ವಿರಾಜಪೇಟೆ ತಾಲೂಕುಗಳು. |
- ದಿನಾಂಕ: 19-03-2015 ರಂದು ಮಂಗಳೂರು ನಗರದಲ್ಲಿ ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪರಿಶಿಷ್ಟ ಪಂಗಡದ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯಿತಿ ಚುನಾಯಿತ ಸದಸ್ಯರುಗಳಿಗೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಒಂದು ದಿನದ ತರಬೇತಿ
- ಮೈಸೂರು ಜಿಲ್ಲೆಯ ಹುಣಸೂರು ಹಾಗೂ ಪಿರಿಯಾಪಟ್ಟಣ ತಾಲೂಕುಗಳ ಪರಿಶಿಷ್ಟ ಪಂಗಡದ ಜಿಲ್ಲಾ, ತಾಲೂಕು ಮತ್ತು ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ದಿನಾಂಕ: 27/06/2016 ರಂದು ವೀಣೆ ಶೇಷಣ್ಣ ಭವನದ (ಗಾನಭಾರತಿ), ಕುವೆಂಪುನಗರ, ಮೈಸೂರು ಇಲ್ಲಿ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
- ದಿನಾಂಕ: 23/02/2019 ರಂದು ಉಡುಪಿ ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದವರಿಗೆ ಜಾತಿಪ್ರಮಾಣ ಪತ್ರವನ್ನು ನೀಡುವಾಗ ಮತ್ತು ಪಡೆಯುವಾಗ ಅನುಸರಿಸಬೇಕಾದ ಕಾನೂನು ಕ್ರಮಗಳ ಕುರಿತು ಕಂದಾಯ ಅಧಿಕಾರಿಗಳು ಮತ್ತು ಪರಿಶಿಷ್ಟ ಪಂಗಡದ ಮುಖಂಡರಿಗೆ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
- ಉಡುಪಿ ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡದವರಿಗೆ ಜಾತಿಪ್ರಮಾಣ ಪತ್ರವನ್ನು ನೀಡುವಾಗ ಮತ್ತು ಪಡೆಯುವಾಗ ಅನುಸರಿಸಬೇಕಾದ ಕಾನೂನು ಕ್ರಮಗಳ ಕುರಿತು ಕಂದಾಯ ಅಧಿಕಾರಿಗಳು ಮತ್ತು ಪರಿಶಿಷ್ಟ ಪಂಗಡದ ಮುಖಂಡರಿಗೆ ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮ
- ಪರಿಶಿಷ್ಟ ವರ್ಗದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಇರುವ ಸರ್ಕಾರದ ಯೋಜನೆಗಳು/ಕಾರ್ಯಕ್ರಮಗಳ ಒಂದು ದಿನದ ಅರಿವು ಕಾರ್ಯಕ್ರಮ
- ಶಿಕ್ಷಣದ ಮಹತ್ವ ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮ
- ಅನುಸೂಚಿತ ಬುಡಕಟ್ಟುಗಳ ಮತ್ತು ಇತರ ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಕ್ಕುಗಳನ್ನು ಮಾನ್ಯ ಮಾಡುವ ಅಧಿನಿಯಮ-2006 ಮತ್ತು ನಿಯಮಗಳು-2008 ಕುರಿತು ಅರಿವು ಮತ್ತು ತರಬೇತಿ
- ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ಇರುವ ಕೇಂದ್ರ ಮತ್ತು ರಾಜ್ಯ ಸರ್ಕಾರ/ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕಾರ್ಯಕ್ರಮಗಳು ಹಾಗೂ ಉದ್ಯೋಗ ಖಾತ್ರಿ ಯೋಜನೆ ಕುರಿತು ಅರಿವು ಕಾರ್ಯಕ್ರಮ
- ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರ ಯೋಜನೆಯ ಮಾಹಿತಿ ಕಾರ್ಯಗಾರ
- ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ಯುವತಿಯರಿಗೆ ವಿವಿಧ ವೃತ್ತಿ ಕೌಶಲ್ಯ ತರಬೆತಿ
ಸಂಸ್ಥೆಯ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳ ಅರಣ್ಯವಾಸಿ ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ/ ಯುವತಿಯರಿಗೆ ವಿವಿಧ ವೃತ್ತಿ ಕೌಶಲ್ಯ ತರಬೇತಿಗಳು ಅಂದರೆ ಹೊಲಿಗೆ, ಕಂಪ್ಯೂಟರ್ ನಿರ್ವಹಣೆ, ಜೇನುಸಾಕಾಣಿಕೆ, ಪಶುಸಂಗೋಪನೆ, ಮೊಬೈಲ್ ರಿಪೇರಿ, ಲಘುವಾಹನ ಚಾಲನಾ ತರಬೇತಿ ನೀಡಲಾಗಿದ್ದು, ಹೊಲಿಗೆ ಹಾಗೂ ಲಘುವಾಹನ ಚಾಲನಾ ತರಬೇತಿ ಪಡೆದ ಫಲಾನುಭವಿಗಳಿಗೆ ಕ್ರಮವಾಗಿ ಹೊಲಿಗೆ ಯಂತ್ರಗಳನ್ನು ಹಾಗೂ ಚಾಲನಾ ಪರವಾನಗಿಯನ್ನು ವಿತರಿಸಲಾಗಿದೆ.
- ಆಶ್ರಮ ಶಾಲೆಗಳಲ್ಲಿ ಇಂಗ್ಲಿಷ್, ಗಣಿತ ಮತ್ತು ವಿಜ್ಞಾನ ಬೋಧಿಸುವ ಶಿಕ್ಷಕರಿಗೆ ಪುನರ್ಮನನ ತರಬೇತಿ:
- ಮೇದ ಮತ್ತು ಸಿದ್ಧಿ ಬುಡಕಟ್ಟು ಸಮುದಾಯದವರಿಗೆ ಬಿದಿರಿನ ಕರಕುಶಲ ವಸ್ತುಗಳ ತಯಾರಿಕಾ ಕೌಶಲ್ಯ ತರಬೇತಿ
- ಬುಡಕಟ್ಟು ಸಮುದಾಯದವರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಆರೋಗ್ಯ ಅರಿವು ಕಾರ್ಯಕ್ರಮ
- ಸ್ವಚ್ಛ ಶಾಲೆ, ಸ್ವಚ್ಛ ಗ್ರಾಮ ಅರಿವು ಕಾರ್ಯಕ್ರಮ
- ಚಾಮರಾಜನಗರ ಜಿಲ್ಲೆಯ 36 ಆಶ್ರಮಶಾಲೆ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿ ನಿಲಯಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಸ್ವಚ್ಛ ಶಾಲೆ, ಸ್ವಚ್ಛ ಗ್ರಾಮದ ಬಗ್ಗೆ ಅರಿವು ಮೂಡಿಸಲಾಯಿತು.
- ದಕ್ಷಿಣ ಕನ್ನಡ ಜಿಲ್ಲೆಯ 26 ಆಶ್ರಮಶಾಲೆ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿ ನಿಲಯಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಸ್ವಚ್ಛ ಶಾಲೆ, ಸ್ವಚ್ಛ ಗ್ರಾಮದ ಬಗ್ಗೆ ಅರಿವು ಮೂಡಿಸಲಾಯಿತು.
- ಉಡುಪಿ ಜಿಲ್ಲೆಯ 13 ಆಶ್ರಮಶಾಲೆ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿ ನಿಲಯಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಸ್ವಚ್ಛ ಶಾಲೆ, ಸ್ವಚ್ಛ ಗ್ರಾಮದ ಬಗ್ಗೆ ಅರಿವು ಮೂಡಿಸಲಾಯಿತು.
- ಚಿಕ್ಕಮಗಳೂರು ಜಿಲ್ಲೆಯ 24 ಆಶ್ರಮಶಾಲೆ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿ ನಿಲಯಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಸ್ವಚ್ಛ ಶಾಲೆ, ಸ್ವಚ್ಛ ಗ್ರಾಮದ ಬಗ್ಗೆ ಅರಿವು ಮೂಡಿಸಲಾಯಿತು.
- ತುಮಕೂರು ಜಿಲ್ಲೆಯ 09 ಆಶ್ರಮಶಾಲೆ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿ ನಿಲಯಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಸ್ವಚ್ಛ ಶಾಲೆ, ಸ್ವಚ್ಛ ಗ್ರಾಮದ ಬಗ್ಗೆ ಅರಿವು ಮೂಡಿಸಲಾಯಿತು.
- ತರಬೇತಿ ಮತ್ತು ಅರಿವು ಮೂಡಿಸುವ ಇತರೆ ಕಾರ್ಯಕ್ರಮಗಳು
- Sickle Cell Anemia and water bodies ಕುರಿತು ತಮಿಳುನಾಡು, ಕೇರಳ ಮತ್ತು ಕರ್ನಾಟಕ ರಾಜ್ಯಗಳನ್ನೊಳಗೊಂಡಂತೆ ಬುಡಕಟ್ಟು ಸಮುದಾಯಗಳು ಇರುವಂತಹ ಜಿಲ್ಲೆಗಳ ಐಟಿಡಿಪಿ/ಐಟಿಡಿಎ ಅಧಿಕಾರಿಗಳು, ವೈದ್ಯಕೀಯ/ಆರೋಗ್ಯಾಧಿಕಾರಿಗಳು, ರಾಜ್ಯ ಸರ್ಕಾರದ ಮೀನುಗಾರಿಕೆ, ಸಣ್ಣ ನೀರಾವರಿ ಮತ್ತು ಮಣ್ಣು ಸಂರಕ್ಷಣಾ ಇಲಾಖೆಗಳ ಪ್ರತಿನಿಧಿಗಳಿಗೆ ತರಬೇತಿ ಕಾರ್ಯಗಾರವನ್ನು ದಿನಾಂಕ 31/05/2015 ರಂದು ಆಡಳಿತ ತರಬೇತಿ ಸಂಸ್ಥೆ, ಮೈಸೂರು ಇಲ್ಲಿ ಆಯೋಜಿಸಲಾಗಿತ್ತು.
- ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕುರಿತು ಹಾವೇರಿ ಜಿಲ್ಲೆಯ ಪರಿಶಿಷ್ಟ ಪಂಗಡದ ಜನಪ್ರತಿನಿಧಿಗಳು ಹಾಗೂ ಕಾರ್ಯಕ್ರಮ ಅನುಷ್ಟಾನಾಧಿಕಾರಿಗಳಿಗೆ ಯೋಜನೆಯ ಕುರಿತು ಒಂದು ದಿನದ ಅರಿವು ಮತ್ತು ತರಬೇತಿ ಕಾರ್ಯಕ್ರಮವನ್ನು ದಿನಾಂಕ: 01/09/2015 ರಂದು ಹಾವೇರಿ ಜಿಲ್ಲಾ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿತ್ತು.
- ವಿವಿಧ ಬುಡಕಟ್ಟು ಸಮುದಾಯಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಅಧ್ಯಯನದ ಸಂಶೋಧನಾ ವಿಧಾನ ಕುರಿತು ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಾಹಿತಿ ಸಂಗ್ರಹಕಾರರಿಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಪ್ರಾದೇಶಿಕ ದೂರವಾಣಿ ತರಬೇತಿ ಕೇಂದ್ರ, ಮೈಸೂರು ಇಲ್ಲಿ ದಿನಾಂಕ: 20/06/2016 ರಂದು ಆಯೋಜಿಸಲಾಯಿತು.
- ರಾಜ್ಯದಲ್ಲಿನ ಹಕ್ಕಿ-ಪಿಕ್ಕಿ ಬುಡಕಟ್ಟು ಜನಾಂಗದ ನಾಟಿ ಔಷಧಿ ಪದ್ಧತಿ ಕುರಿತಂತೆ ಶಿವಮೊಗ್ಗ ನಗರದಲ್ಲಿ ದಿನಾಂಕ: 28/11/2016 ರಂದು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
- ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಬಗ್ಗೆ ಜಿಪಂ/ತಾಪಂ./ಗ್ರಾಪಂ. ಸದಸ್ಯರಿಗೆ, ಬುಡಕಟ್ಟು ಸಮುದಾಯದ ಜನಪ್ರತಿನಿಧಿಗಳಿಗೆ ಹಾಗೂ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಿಗೆ ಯೋಜನೆಯ ಕುರಿತು ಒಂದು ದಿನದ ಅರಿವು ಮೂಡಿಸುವ ತರಬೇತಿ ಕಾರ್ಯಕ್ರಮಗಳನ್ನು ದಾವಣಗೆರೆ ನಗರದಲ್ಲಿ ದಿನಾಂಕ: 04/01/2017 ರಂದು ದಾವಣಗೆರೆ ಜಿಲ್ಲಾ ಆಡಳಿತ ಭವನದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
- ಬುಡಕಟ್ಟು ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸುವ ಸಲುವಾಗಿ ಒಂದು ದಿನದ ಕಾರ್ಯಾಗಾರವನ್ನು ದಿನಾಂಕ 21/04/2017 ರಂದು ಮೈಸೂರು ನಗರದಲ್ಲಿನ ಆಡಳಿತ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಲಾಗಿತ್ತು.
- ದಿನಾಂಕ 23/10/2017 ರಂದು ಮೈಸೂರು ನಗರದ ರಾಜ್ಯ ನಗರಾಭಿವೃದ್ಧಿ ಸಂಸ್ಥೆಯ ಸಭಾಂಗಣದಲ್ಲಿ ಅರಣ್ಯ ಹಕ್ಕು ಕಾಯಿದೆ ಕುರಿತು ಬುಡಕಟ್ಟು ಸಮುದಾಯದ ಮುಖಂಡರುಗಳಿಗೆ ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರ ಆಯೋಜಿಸಲಾಗಿತ್ತು.
- ರಾಜ್ಯದಲ್ಲಿನ ವಿವಿಧ ಜಿಲ್ಲೆಗಳ ಪರಿಶಿಷ್ಟ ಪಂಗಡದ ಬುಡಕಟ್ಟು ಸಮುದಾಯದ ನಿರುದ್ಯೋಗಿ ಯುವಕ/ಯುವತಿಯರಿಗೆ ಹೊಲಿಗೆ, ಕಂಪ್ಯೂಟರ್ ನಿರ್ವಹಣೆ, ಮೊಬೈಲ್ ದುರಸ್ಥಿ, ಜೇನು ಸಾಕಾಣಿಕೆ, ಪಶುಪಾಲನೆ, ಲಘುವಾಹನ ಚಾಲನಾ ತರಬೇತಿ ಸೇರಿದಂತೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನು ಸ್ಟೆಪ್ಸ್ ಸಂಸ್ಥೆ, ಬೆಂಗಳೂರು ಇವರ ಮೂಲಕ ಆಯೋಜಿಸಲಾಗಿತ್ತು.
- ದಿನಾಂಕ 03/04/2018 ಮತ್ತು 04/04/2018 ರಂದು ಹಕ್ಕಿಪಿಕ್ಕಿ ಬುಡಕಟ್ಟು ಸಮುದಾಯದ ನಾಟಿ ವೈದ್ಯರಿಗೆ ನಾಟಿ ಔಷಧಿ ಪದ್ಧತಿ ಕುರಿತಂತೆ ಎರಡು ದಿನಗಳ ಕಾರ್ಯಾಗಾರವನ್ನು ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿತ್ತು.
- ದಿನಾಂಕ 04/06/2018 ರಂದು ಜೇನುಕುರುಬ ಬುಡಕಟ್ಟು ಸಮುದಾಯದ ವಿವಾಹ ಪದ್ಧತಿ ಕುರಿತು ಒಂದು ದಿನದ ಕಾರ್ಯಾಗಾರವನ್ನು ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲೂಕಿನಲ್ಲಿ ಆಯೋಜಿಸಲಾಗಿತ್ತು.
- ದಿನಾಂಕ 18/09/2018 ರಂದು ಉದ್ಯೋಗ ಖಾತ್ರಿ ಯೋಜನೆ ಕುರಿತಂತೆ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಹಾಗೂ ಪರಿಶಿಷ್ಟ ಪಂಗಡದ ಚುನಾಯಿತ ಪ್ರತಿನಿಧಿಗಳಿಗೆ ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವನ್ನು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಆಯೋಜಿಸಲಾಯಿತು.
- ಬುಡಕಟ್ಟು ಸಮುದಾಯದ ಮಕ್ಕಳಲ್ಲಿನ ಅಪೌಷ್ಠಿಕತೆಯನ್ನು ಕುಂಠಿತಗೊಳಿಸಿ ಸಮಗ್ರ ಪೋಷಣೆ ಒದಗಿಸುವ ನಿಟ್ಟಿನಲ್ಲಿ “ರಾಷ್ಟ್ರೀಯ ಪೋಷಣ್ ಮಹಾ” (National Nutrition Mission), ಕಾರ್ಯಕ್ರಮವನ್ನು ದಿನಾಂಕ: 14/09/2018 ರಂದು ಅಂಬೇಡ್ಕರ್ ಭವನ, ಬೆಂಗಳೂರು ಇಲ್ಲಿ ಆಯೋಜಿಸಲಾಗಿತ್ತು.
- ಕೇಂದ್ರ ಮತ್ತು ರಾಜ್ಯ ಸರ್ಕಾರ/ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಗಮದ ಕಾರ್ಯಕ್ರಮಗಳ ಕುರಿತು ಹಾಗೂ ಉದ್ಯೋಗ ಖಾತ್ರಿ ಯೋಜನೆ ಕುರಿತಂತೆ ಪರಿಶಿಷ್ಟ ಪಂಗಡದ ಜನಪ್ರತಿನಿಧಿಗಳಿಗೆ ಹಾಗೂ ಸಮುದಾಯದವರಿಗೆ ಒಂದು ದಿನದ ಅರಿವು ಕಾರ್ಯಾಗಾರ ಏರ್ಪಡಿಸಲು ಸಂಬಂಧಿಸಿದ ಸಂಸ್ಥೆಗೆ ಅನುದಾನ ಬಿಡುಗಡೆ ಮಾಡಲಾಗಿದೆ.